*ಕಾಂಗ್ರೆಸ್ ಸರ್ಕಾರ ರಚಿಸುವುದು ನಿಶ್ಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾನು ಮುಂಚೆಯೇ 120 ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದೆ, 120ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಈ ಭಾರೀ ಕಾಂಗ್ರೆಸ್ ಸರ್ಕಾರ ರಚಿಸುವುದು ನಿಶ್ಚಿತವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಯಾರು ಆಗುತ್ತಾರೆ ಎನ್ನುವುದಕ್ಕಿಂತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಮುಖ್ಯವಿದೆ. ಬಹುಮತ ಸಿಕ್ಕ ನಂತರ ಎಲ್ಲಾ ಶಾಸಕರು ಸೇರಿ ಸಿಎಂ ಆಯ್ಕೆ ಬಗ್ಗೆ ಚರ್ಚೆ ನಡಸಲಿದ್ದಾರೆ ಎಂದರು.
ಮೈತ್ರಿಗೆ ನಾವು ಸಿದ್ಧ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಳ್ಳೆಯ ಸರ್ಕಾರದ ಆಡಳಿತ ಮಾಡಲು ಒಳ್ಳೆಯದಾಗುತ್ತದೆ. ದೇವೇಗೌಡರದ್ದು, ಕುಮಾರಸ್ವಾಮಿ ಸಲಹೆ ಇದ್ದರೆ ಒಳ್ಳೆಯದು. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದು ಅವರ ಹಗಲುಗನಸಾಗಿದೆ. ಅತಂತ್ರ ಫಲಿತಾಂಶ ನೂರಕ್ಕೆ ನೂರರಷ್ಟು ಬರಲ್ಲ ಎಂದು ಹೇಳಿದರು.
ಬಿಜೆಪಿ ವಿರೋಧಿ ಅಲೆ, ಬೆಲೆ ಏರಿಕೆ, 4 ವರ್ಷದಿಂದ ಯಾವುದೇ ಅಭಿವೃದ್ಧಿ ಯೋಜನೆಗಳಿಲ್ಲ. ವಿಶೇಷವಾಗಿ 40 ಪರ್ಸೆಂಟ್ ಸರ್ಕಾದ ಇಡೀ ವಿಶ್ವದಲ್ಲೇ ಫೇಮಸ್ ಆಯ್ತು. ರಾಷ್ಟ್ರೀಯ ವಾಹಿನಿಗಳಲ್ಲೂ ಸಹ 40 ಪರ್ಸೆಂಟ್ ಸರ್ಕಾರ ಅಂತಾ ಹೇಳುತ್ತಾರೆ. ನಮ್ಮ ನಾಯಕರು ಕಲೆಕ್ಟೀವ್ ಆಗಿ ಪ್ರಚಾರ ಮಾಡಿದರು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ ಎಲ್ಲರೂ ತಮ್ಮ ತಮ್ಮ ಭಾಗದಲ್ಲಿ ಒಳ್ಳೆಯ ಪ್ರಚಾರ ಮಾಡಿದರು ಎಂದರು.
ಕಡಿಮೆ ಕ್ಷೇತ್ರ ಬಂದರೂ ಸರ್ಕಾರ ಮಾಡ್ತೀವಿ ಎಂಬ ಆರ್.ಅಶೋಕ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಆಪರೇಷನ್ ಕಮಲ ಮಾಡಲು ಆಗಲ್ಲ, ಬಹಳ ಗ್ಯಾಪ್ ಇದೆ. ಸರ್ಕಾರ ಮಾಡಲು 30 ರಿಂದ 40 ಸೀಟ್ ಅವರಿಗೆ ಬೇಕಾಗುತ್ತದೆ. ಆದರೆ ಅದು ಅಸಾಧ್ಯ. ವಿಪಕ್ಷದಲ್ಲಿ ಕುಳಿತು ಒಳ್ಳೆಯ ಸಲಹೆ ನೀಡುವುದು ಸೂಕ್ತ. ಬಿಜೆಪಿ 75 ರಿಂದ 80 ಕ್ಷೇತ್ರ ಮಾತ್ರ ಬರುತ್ತೆ. ಅತಂತ್ರ ಫಲಿತಾಂಶ ನೂರಕ್ಕೆ ನೂರು ಬರಲ್ಲ. ಕಾಂಗ್ರೆಸ್ ಸರ್ಕಾರ ರಚನೆ ಆಗಿಯೇ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಪ್ರಚಾರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದ್ದು ಬೇರೆ, ಲೋಕಸಭಾ ಚುನಾವಣೆ ಬೇರೆ. ಜನ ಅಭಿವೃದ್ಧಿ ನೋಡ್ತಾರೆ. ಬೆಲೆ ಏರಿಕೆ ಆಗಲು ಮೋದಿ ಕಾರಣ. ಹೀಗಾಗಿ ಮೋದಿಯವರ ಭಾಷಣ ಕರ್ನಾಟಕ ಜನ ತಿರಸ್ಕಾರ ಮಾಡಿದ್ದಾರೆ ಎಂದು ಟೀಕಿಸಿದರು.
ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನ ವಿಚಾರವಾಗಿ ಮಾತನಾಡಿ, ಮುಂಚೆಯಿಂದಲೂ ಸಹ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಆಗುತ್ತದೆ. ಬೆಂಗಳೂರು ನಗರದಲ್ಲಿಯೂ ಸಹ ಕಡಿಮೆ ಮತದಾನ ಆಗಿದೆ ಎಂದರು.
ಶಾಸಕ ಅಭಯ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಎಂಇಎಸ್‌ಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ. ಅಭಯ ಪಾಟೀಲ್ ಕಾರ್ಯವೈಖರಿ, ಅಧಿಕಾರಿಗಳ, ಪೊಲೀಸರನ್ನು ದುರುಪಯೋಗ ಮಾಡಿಕೊಂಡಿದ್ದರಿಂದ ಜನ ಅವರನ್ನು ಸೋಲಿಸಲು ಬೆನ್ನು ಹತ್ತಿದ್ದಾರೆ. ಅದು ನಮ್ಮ ವೈಫಲ್ಯ ಅಲ್ಲ. ಬೆಳಗಾವಿಯಲ್ಲಿ ಎಂಇಎಸ್ ಅಸ್ತಿತ್ವ ಹುಟ್ಟಿಕೊಳ್ಳಲು ಅಭಯ್ ಪಾಟೀಲ್ ಕಾರಣ ಎಂದು ವಾಗ್ದಾಳಿ ನಡೆಸಿದರು.
ಮರಾಠಾ ಜನರ ಮೇಲೆ ಸುಮಾರು ಕೇಸ್ ಹಾಕಿದ್ದು, ತಹಶಿಲ್ದಾರ್ ಕಚೇರಿ, ಸಬ್‌ರಿಜಿಸ್ಟರ್ ಕಚೇರಿಗಳಿಂದ ತೊಂದರೆ ಕೊಟ್ಟಿದ್ದು, ಲೇಔಟ್‌ಗಳಲ್ಲಿ ತೊಂದರೆ ಕೊಟ್ಟಿದ್ದರಿಂದ ಮರಾಠಿಗರು ಸೇರಿದಂತೆ ಎಲ್ಲಾ ಸಮುದಾಯದ ಜನ ಅಭಯ್ ಪಾಟೀಲ್ ಅವರನ್ನು ಸೋಲಿಸಲು ನಿರ್ಣಯ ಮಾಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ಬೆಳಗಾವಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಸವದತ್ತಿ ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಸೇರಿದಂತೆ ಅನೇಕ ಜಿಲ್ಲಾ ಮುಖಂಡರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ