GIT add 2024-1
Beereshwara 33

*ಮಹಿಳೆಯರ ಸಂಕಷ್ಟ ಪರಿಹರಿಸಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ*

Anvekar 3
Cancer Hospital 2

ನಿಪ್ಪಾಣಿ ಕ್ಷೇತ್ರದ ಅಭಿವೃದ್ಧಿಗೆ ಪ್ರಿಯಂಕಾಗೆ ಮತ ನೀಡಿ: ಸಚಿವ ಸತೀಶ್‌ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದು, ಮಹಿಳೆಯರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.

ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಈ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಾತ್ರ ದೊಡ್ಡದಿದ್ದು, ಕಾಂಗ್ರೆಸ್‌ ಪಕ್ಷ ಪುರುಷರಿಗೆ ಮಾತ್ರವಲ್ಲದೇ ಮಹಿಳೆಯರಿಗೂ ಟಿಕೆಟ್‌ ನೀಡಿ ಮಹಿಳೆಯರ ಪರವಾಗಿ ನಿಂತಿದೆ. ಹೀಗಾಗಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ನನಗೆ ಮತದಾನ ನೀಡಿ ಕ್ಷೇತ್ರದ ಅಭಿವೃದ್ದಿಗೆ ನನಗೆ ಆಶೀರ್ವಾದ ಮಾಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಬಡವರು ಸ್ವಾಭಿಮಾನದಿಂದ ಬದುಕು ನಡೆಸಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳು ಬಡವರ ಬದುಕಿಗೆ ನೆಮ್ಮದಿಯನ್ನು ತಂದಿದೆ. ಸಂವಿಧಾನದ ಆಶಯಗಳು ಜಾರಿಯಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಕಾಂಗ್ರೆಸ್ ಪಕ್ಷ ಜನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಪರವಾಗಿ ಇದೆ. ಆದರೆ, ಬಿಜೆಪಿಗೆ ಸಂವಿಧಾನದ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಟೀಕಿಸಿದರು.

ರಾಜಕಾರಣದ ಮೂಲಕ ಸಮಾಜ ಸೇವೆ ಮಾಡುವುದರ ಜೊತೆಗೆ ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಬಯಸುವ ಯುವಕರಿಗೆ ತಮ್ಮ ಫೌಂಡೇಷನ್ ಮೂಲಕ ಸಹಾಯ ಸಹಕಾರ ನೀಡುವ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರು ನನಗೆ ಆದರ್ಶ. ಅವರ ದಾರಿಯಲ್ಲೇ ನಡೆದು ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನಿಮ್ಮ ಮನೆಯ ಮಗಳಾದ ನನಗೂ ಸಹ ನಮ್ಮ ತಂದೆಯವರಿಗೆ ನೀಡಿದ ಬೆಂಬಲ, ಅಭಿಮಾನವನ್ನು ನೀಡಿ ಎಂದ ಅವರು, ಕಳೆದ 15 ವರ್ಷದಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ತಂದೆ ಸತೀಶ ಜಾರಕಿಹೊಳಿ ಅವರು ತಮ್ಮ ಮತಕ್ಷೇತ್ರದ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶಾಲಾ ಕಾಲೇಜುಗಳನ್ನು ನಿರ್ಮಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ನನಗೂ ಇದೇ ರೀತಿಯಲ್ಲಿ ಜನರ ಸೇವೆ ಮಾಡುವ ಬಯಕೆಯಿದೆ. ಆದ್ದರಿಂದ ಮತದಾರರು ನನಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂಬತ್ತು ತಿಂಗಳ ಒಳಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದೆ. ಪ್ರತಿಯೊಂದು ಕುಟುಂಬಗಳಿಗೆ ನಾಲ್ಕರಿಂದ ಐದು ಸಾವಿರ ಹಣ ಉಳಿತಾಯವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿಯೊಂದು ಮನೆಯ ಗೃಹಿಣಿಯರು 2000 ಪಡೆದುಕೊಳ್ಳುತ್ತಿದ್ದಾರೆ. ವಿಧ್ಯುತ್ ಅನ್ನು ಉಚಿತವಾಗಿ ಪಡೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯದಲ್ಲಿ 5 ಕೆಜಿ ಅಕ್ಕಿ 5 ಕೆ.ಜಿ ಗೆ ಹಣವನ್ನು ಪಡೆಯುತ್ತಿದ್ದಾರೆ. ಆದ್ದರಿಂದ ಈ ಭಾರಿ ಕ್ಚೇತ್ರ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕರು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಅಧಿಕಾರ ಹಿಡಿದವರು. ಇಲ್ಲಿಯ ತನಕ ಒಂದು ಉದ್ಯೋಗವನ್ನು ಸೃಷ್ಟಿಸಿಲ್ಲ. ಆದ್ದರಿಂದ ಬಿಜೆಪಿಯ ಸುಳ್ಳು ಭರವಸೆಗಳಿಗೆ ನಂಬಿ ಮತ ಹಾಕದೆ ನುಡಿದಂತೆ ನಡೆದ ಕಾಂಗ್ರೆಸ್‌ ಬೆಂಬಲಿಸಬೇಕು. ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಿದರೆ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ಕಾರ್ಯಕರ್ತರ ಕಷ್ಟ ಸುಃಖಗಳಿಗೆ ಸದಾ ಭಾಗಿಯಾಗುವೆ. ಕಚೇರಿ ಹಂತದಲ್ಲಿ ಸಾರ್ವಜನಿಕರ ಕೆಲಸಗಳು ಸುಲಭವಾಗಿ ಆಗುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಆಸ್ಪದ ನೀಡದೆ ಭ್ರಷ್ಟಾಚಾರ ಮುಕ್ತ ತಾಲೂಕಾಗಿಸಲು ಶ್ರಮಿಸುವುದಾಗಿ ತಿಳಿಸಿದರು.
ಈ ವೇಳೆ ಗ್ರಾಮಗಳಿಗೆ ಆಗಮಿಸಿದ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಮಹಿಳೆಯರು ಆರತಿ ಎತ್ತಿ, ಹೂ ಮಾಲೆ ಹಾಕುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು.

Emergency Service

ಈ ಸಂದರ್ಭದಲ್ಲಿ ಮಾಜಿ ಸಚಿವ ಎ.ಬಿ.ಪಾಟೀಲ, ಶಶಿಕಾಂತ ನಾಯಿಕ, ಮುಖಂಡರಾದ ಜಯಪ್ರಕಾಶ ಕರಜಗಿ, ವಿನೋದ ನಾಯಿಕ, ದಿಲೀಪ್ ಹೊಸಮನಿ,ಚಿದಾನಂದ ಕರ್ದನ್ನವರ, ಪ್ರವೀಣ ನೇಸರಿ, ವಿಕ್ರಮ್ ಕರನಿಂಗ ತಬ್ರೇಜ್ ಹಜರತಭಾಯ್ ಮುಕ್ತಾರ್ ನದಾಫ್, ಮಹೇಶ ದವಡೆ, ಪ್ರಶಾಂತ ಕೋಳಿ, ಮಹೇಶ ಹೊಟ್ಟಿವಳಿ, ನಾರಾಯಣ ಕದಂ, ಕುಮಾರ ಕಬ್ಬೂರಿ, ರಿಜ್ವಾನ್ ರಾಂಪುರೆ ಮುಸ್ತಫಾ ಮಕಾಂದರ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ನಿಪ್ಪಾಣಿ ಕ್ಷೇತ್ರದ ಅಭಿವೃದ್ಧಿಗೆ ಪ್ರಿಯಂಕಾಗೆ ಮತ ನೀಡಿ: ಸಚಿವ ಸತೀಶ್‌ ಜಾರಕಿಹೊಳಿ:

ಚಿಕ್ಕೋಡಿ ಲೋಕಸಭೆ ಮೂಲಕ ನಿಪ್ಪಾಣಿ ಕ್ಷೇತ್ರದ ಅಭಿವೃದ್ಧಿ ಸಾಧಿಸಲು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಆಯ್ಕೆ ಮಾಡುವುದು ಅಗತ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
ನಿಪ್ಪಾಣಿ ನಗರದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಶರದ್ ಪವಾರ್ ಪಕ್ಷದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಘಟಕದಿಂದ ಚಿಕ್ಕೋಡಿ ಲೋಕಸಭೆಯ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಬೆಂಬಲವಾಗಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಕಾಂಗ್ರೆಸ್‌ ಪಕ್ಷದಿಂದ ಜನ ಸಾಮಾನ್ಯರ ಅಭಿವೃದ್ಧಿಯಾಗುತ್ತಿರುವುದರಿಂದ ಕಾಂಗ್ರೆಸ್‌ನ ಶಕ್ತಿ ದೇಶದ ಅಗತ್ಯವಾಗಿದೆ. ಆದ್ದರಿಂದ ಚಿಕ್ಕೋಡಿ ಲೋಕಸಭೆಗೆ ಮೇ. 07 ರಂದು ಜರುಗುವ ಚುನಾವಣೆಯಲ್ಲಿ ಪ್ರಿಯಾಂಕಾ ಅವರು ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಅವರ ಕ್ರಮ ಸಂಖ್ಯೆ 2 ಆಗಿದೆ. ಹೀಗಾಗಿ ಭಾರಿ ಮತಗಳ ಅಂತರದಿಂದ ಅವರನ್ನು ಆಯ್ಕೆ ಮಾಡಲು ಮತದಾರರು ಮುಂದಾಗಬೇಕು ಎಂದರು.

ಎನ್ ಸಿಪಿ ಮುಖಂಡ ಉತ್ತಮ ಪಾಟೀಲ ಮಾತನಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆ ಅತ್ಯಂತ ಮಹತ್ವದ್ದು, ಜಿಲ್ಲಾ ಮುಖಂಡರಾದ ಸತೀಶ ಅಣ್ಣಾ ಅವರ ಮಾರ್ಗದರ್ಶನದಲ್ಲಿ ನಿಪಾಣಿ ಕ್ಷೇತ್ರವನ್ನು ಅಭಿವೃದ್ದಿ ಪಡಿಸುವುದು ಅವಶ್ಯವಾಗಿದೆ. ಹಾಗಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಂಕಾ ಜಾರಕಿಹೊಳಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕ್ರಾಂತಿ ಸೇನೆಯ ಅಧ್ಯಕ್ಷ ಅಶೋಕ್ ಕುಮಾರ್ ಅಸೋದೆ ಮಾತನಾಡಿ, ನಿಪ್ಪಾಣಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಪೂರ್ಣ ಎಸ್ ಸಿ, ಎಸ್ ಟಿ ಸಮುದಾಯದ ಬೆಂಬಲವಿದ್ದು, ಇಡೀ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಸಮುದಾಯ ಹೆಚ್ಚಿನ ಮತಗಳನ್ನು ಪಡೆಯಲಿದೆ. ಹಾಗಾಗಿ ಈ ಭಾರಿ ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲುವು ನಿಶ್ಚಿತ ಎಂದರು.

ಮಾಜಿ ಶಾಸಕ ಸುಭಾಷ ಜೋಶಿ ಮಾತನಾಡಿ, ನಿಪಾಣಿ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅತಿ ಹೆಚ್ಚು ಮತ ಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಈ ವೇಳೆ ಕ್ರಾಂತಿ ಸೇನೆಯ ಅಧ್ಯಕ್ಷ ಅಶೋಕಕುಮಾರ ಅಸೋದೆ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಸಮ್ಮುಖದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಶರದ್ ಪವಾರ್ ಪಕ್ಷದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಘಟಕದಿಂದ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಸಾರ್ವಜನಿಕವಾಗಿ ಬೆಂಬಲಿಸಲಾಯಿತು.

ಈ ವೇಳೆ ಕಾಕಾಸಾಹೇಬ್ ಪಾಟೀಲ್, ವೀರಕುಮಾರ ಪಾಟೀಲ್, ನಿಪಾನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕದಂ, ವಾಣಿಜ್ಯೋದ್ಯಮಿ ರೋಹನ್ ಸಾಳ್ವೆ, ಕೌನ್ಸಿಲರ್ ದತ್ತಾ ನಾಯ್ಕ್, ಅನಿತಾ ಪಠಾಡೆ, ದಿಲೀಪ್ ಪಠಾಡೆ, ಶೌಕತ್ ಮಾನೇರ್, ಸಂಜಯ್ ಪಾವ್ಲೆ, ದೀಪಕ್ ಸಾವಂತ್, ಸುನೀಲ್ ಶೇಲಾರ್, ಗಿರಿ, ಬಾಳಾಸಾಹೇಬ್ ಸೂರ್ಯವಂಶಿ, ಸಚಿನ್ ಹೆಗ್ಡೆ, ಎಸ್‌ಸಿಎಸ್‌ಟಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು. ಉತ್ತಮ್ ಅನ್ನ ಪ್ರೇಮಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಶರದ್ ಪವಾರ್ ಗ್ರೂಪ್ ಮತ್ತು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ನಾಗರಿಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Laxmi Tai add
Bottom Add3
Bottom Ad 2