Kannada NewsKarnataka NewsLatest

*ಬಿಜೆಪಿ ಶಾಸಕ ಮುನಿರತ್ನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ಆರ್.ಆರ್ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಅನುಮತಿ ಪಡೆಯದೇ ಅಕ್ರಮವಾಗಿ ಜಿಲೆಟಿನ್ ಸ್ಫೋಟ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಹುಣಸಮಾರನಹಳ್ಳಿ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಜಿಲೆಟಿನ್ ಸ್ಫೋಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ತಹಶಿಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿದ್ದರು.

ಇದೀಗ ಶಾಸಕ ಮುನಿರತ್ನ, ಆನಂದನ್, ಗಣೇಶ್, ರಾಧಮ್ಮ ವಿರುದ್ಧ ಸ್ಫೋಟಕ ಕಾಯ್ದೆ 1884 US9B(1b) ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಅಡಿ ಪ್ರಕರಣ ದಾಖಲಾಗಿದೆ.

Home add -Advt


Related Articles

Back to top button