ರಮೇಶ್ ಜಾರಕಿಹೊಳಿ & ಫ್ರೆಂಡ್ಸ್ ಕಾಂಗ್ರೆಸ್ ಗೆ ಮರು ಸೇರ್ಪಡೆ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ರಮೇಶ್ ಜಾರಕಿಹೊಳಿ ರಾಜೀನಾಮೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಸಹೋದರ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಬಿಜೆಪಿ ನಾಯಕರು ಸ್ಪಷ್ಟಪಡಿಸಬೇಕು. ಇಷ್ಟಕ್ಕೂ ಶಾಸಕ ಸ್ಥಾನಕ್ಕೆ ಯಾಕೆ ರಾಜಿನಾಮೆ ನೀಡುತ್ತಿದ್ದಾರೆ ಎಂಬುದನ್ನು ರಮೇಶ್ ಅವರೇ ಹೇಳಬೇಕು. ಈಗಾಗಲೇ ಹೆಚ್.ವಿಶ್ವನಾಥ್ ಮಾತನಾಡಲು ಶುರು ಮಾಡಿದ್ದಾರೆ. ಬಿಜೆಪಿಯವರು ಮೊದಲು ಸ್ಪಷ್ಟಪಡಿಸಲಿ ಎಂದರು.
ರಮೇಶ್ ಜಾರಕಿಹೊಳಿ ಹಾಗೂ ಫ್ರೆಂಡ್ಸ್ ಕಾಂಗ್ರೆಸ್ ಗೆ ಮರು ಸೇರ್ಪಡೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತೆ. ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ರಾಜಿನಾಮೆ ಸುದ್ದಿಗೆ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ