Belagavi NewsBelgaum NewsKannada NewsKarnataka NewsLatestPolitics

*ರಾಯಬಾಗದಲ್ಲಿ 400 ಕೆ.ವಿ. ವಿತರಣಾ ಕೇಂದ್ರ ಸ್ಥಾಪಿಸಲು ಮಂಜೂರಾತಿ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಂಗಳೂರಿನಲ್ಲಿ ಈಚೆಗೆ ಜರುಗಿದ ಕವಿಪ್ರನಿನಿಯ ತಾಂತ್ರಿಕ ಸಮನ್ವಯ ಸಮಿತಿ ಸಭೆಯಲ್ಲಿ ರಾಯಬಾಗ ತಾಲೂಕಿನ ಮೇಖಳ ಗ್ರಾಮದ ವ್ಯಾಪ್ತಿಯಲ್ಲಿ ಹೊಸದಾಗಿ 400 ಕೆ.ವಿ. ವಿತರಣಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಲ್ಲಿಸಲಾದ ಪ್ರಸ್ತಾವನೆಗೆ ಮಂಜೂರಾತಿ ದೊರೆತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

Related Articles

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿದ ಅವರು, ಈ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸುವುದರಿಂದ ಜಿಲ್ಲೆಯ ವಿತರಣಾ ವ್ಯವಸ್ಥೆ ಸದೃಡಗೊಳ್ಳುವುದಲ್ಲದೇ ಎಲ್ಲ ಜನತೆಗೆ ಇದರ ಉಪಯೋಗವಾಗುವುದೆಂದು ತಿಳಿಸಿದರು.

ನಮ್ಮ ಸರಕಾರವು ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯನ್ನು ಪೂರೈಸಿದ್ದು, ಇದನ್ನು ಈಡೇರಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇಂಧನ ಸಚಿವ ಕೆ.ಜೆ. ಜಾರ್ಜ ಅವರನ್ನು ಅಭಿನಂದಿಸುವುದಾಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

Home add -Advt

Related Articles

Back to top button