*ನಾನು ಸಿಎಂ ಆಗುತ್ತೇನೆ ಎಂದಿದ್ದೆ ಆದ್ರೆ 2028ಕ್ಕೂ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಲಿ, ನಾನು ಕಾಯುತ್ತೇನೆ ಎಂದ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಅವಕಾಶ ಸಿಕ್ಕರೆ 2028ಕ್ಕೆ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದಿದ್ದೆ. ಆದರೆ ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯಲಿ ಸಂತೋಷ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, 2028ಕ್ಕೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದೆ. ಆದರೆ ಡಿ.ಕೆ.ಶಿವಕುಮಾರ್ ನಾನೇ ಮುಂದೆಯೂ ಸಿಎಂ ಎಂದು ಹೇಳುತ್ತಿದ್ದಾರೆ. ಹಾಗಾಗಿ ಅವರೇ ಸಿಎಂ ಆಗಲಿ ಸಂತೋಷ ಎಂದರು.
ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲೇ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿ. ಅವರೇ ಸಿಎಂ ಆಗಲಿ, ನಮಗೆ ಇನ್ನೂ ವಯಸ್ಸಿದೆ. ನಾನಿನ್ನೂ ಕಾಯುತ್ತೇನೆ ಎಂದರು.
ಇದೇ ವೇಳೆ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ, ಅಸಮಾಧಾನವಿಲ್ಲ. ನಾವು ಚನ್ನಾಗಿಯೇ ಇದ್ದೇವೆ. ಸಿದ್ದರಾಮಯ್ಯ ನಮಗೆ ಈಗಲೂ ಆರ್ಮಿ ಕ್ಯಾಪ್ಟನ್. ನಾನು ಅದರ ವೈಸ್ ಕ್ಯಾಪ್ಟನ್. ಯಾರಿಗೂ ಅನುಮಾನ ಬೇಡ. ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




