
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಚಿವರ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ಹೇಳಿದ್ದೇನೆ. ಕನಿಷ್ಠ ಹತ್ತು ಜನರಿಗೆ ಅವಕಾಶ ಕೊಡಬೇಕು ಎಂದಿದ್ದೇನೆ. ಅದರಂತೆ ಈಬಾರಿ ಹೊಸಬರಿಗೂ ಅವಕಾಶ ಸಿಗಲಿದೆ ಎಂದರು.
ಯಾರೆಲ್ಲ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಪಟ್ಟಿ ಬಿಡುಗಡೆ ಬಳಿಕ ಗೊತ್ತಾಗಲಿದೆ. ಇನ್ನು 1-2 ತಿಂಗಳಲ್ಲಿ ನಿಗಮ ಮಂಡಳಿ ಸ್ಥಾನ ಸಹ ಭರ್ತಿಯಾಗುತ್ತದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ