Politics

*ಸಂಪುಟ ಪುನಾರಚನೆ, ಖಾತೆ ಬದಲಾವಣೆ ಸುಳಿವು ನೀಡಿದ್ರಾ ಸಚಿವ ಸತೀಶ್ ಜಾರಕಿಹೊಳಿ?*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ ಪುನಾರಚನೆ, ಕೆಲವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರ ಖಾತೆ ಬದಲಾವಣೆ ಬಗ್ಗೆ ಚರ್ಚೆ ಇದೆ. ಆದರೆ ಯಾವಾಗ ಮಾಡುತ್ತಾರೆ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸಂಪುಟ ಪುನಾರಚನೆ ಮಾಡದೆಯೂ ಇರಬಹುದು. ನನಗಂತೂ ಎರಡು ವರ್ಷಕ್ಕೆ ಸ್ಥಾನ ಬದಲಾವಣೆ ಎಂದು ಹೇಳಿಲ್ಲ. ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲರೂ ಬದಲಾಗಬೇಕು. ಲಿಸ್ಟ್ ನಲ್ಲಿ ಹೆಸರು ಬಂದರೆ ಮನೆ ಖಾಲಿ ಮಾಡಿಕೊಂಡು ಹೋಗಬೇಕು. ದೆಹಲಿ ಹೈಕಮಾಂಡ್ ನಾಯಕರದ್ದೇ ಅಂತಿಮ ತೀರ್ಮಾನ. ಅವರೇ ಫೈನಲ್ ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button