Karnataka NewsLatestPolitics

*ಇಡಿ ದಾಳಿ ವೇಳೆ ಸಿಕ್ಕ ಹಾಣದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿಸಾದಲ್ಲಿ ಅನ್ಡೆದ ಇಡಿ ದಾಳಿಯಲ್ಲಿ ಅಪಾರಪ್ರಮಣದ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಇಡಿ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿರುವುದು ನಮ್ಮದೇ ನಗದು ಹಣ. ಅದನ್ನು ವಾಪಸ್ ಪಡೆಯಲು ಕಾನೂನು ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಾರಿ ನಿರ್ದೇಶನಾಲಯದ ದಾಳಿ ಮುಕ್ತಾಯವಾದ ಬಳಿಕ ಪ್ರತಿಕ್ರಿಯಿಸಿದ ಅವರು, ಇದು ಇಡಿ ದಾಳಿಯಲ್ಲ, ಇದೊಂದು ತಪಾಸಣೆ. ಏನಾದರೂ ಅನುಮಾನಗಳಿದ್ದರೆ ನೋಟಿಸ್ ನೀಡಿ ಮಾಹಿತಿ ಕೇಳಬಹುದಿತ್ತು. ಅಧಿಕಾರಿಗಳು ಕೇಳಿದ ಮಾಹಿತಿಗೆ ನಾವು ಉತ್ತರ ನೀಡಿದ್ದೇವೆ. ಅಧಿಕಾರಿಗಳ ವಿಚಾರಣೆ ಹಾಗೂ ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ ಎಂದರು.

ವಿದೇಶದಲ್ಲಿ ಹೂಡಿಕೆ ಮಾಡುತ್ತಿರುವ ವಿಚಾರದ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನೋಟಿಸ್‌ನಲ್ಲಿ ಫೆಮಾ ಕಾಯ್ದೆ ಉಲ್ಲೇಖಿಸಲಾಗಿದೆ. ಆದರೆ ಹೂಡಿಕೆ ವಿಚಾರ ಇನ್ನೂ ಕಾನೂನು ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button