Latest

*ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಕಾಶಿಯಲ್ಲಿ ಗಂಗಾನದಿಗೆ ‘ಗಂಗಾರತಿ’ ಮಾಡುವ ಮಾದರಿಯಲ್ಲಿಯೇ ಕಾವೇರಿಗೆ ‘ಕಾವೇರಿ ಆರತಿ’ ಕಾರ್ಯಕ್ರಮ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೆ.ಆರ್.ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಡಿಸಿಎಂ, ಗಂಗಾರತಿ ಮಾದರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಹಾಗೂ ಕಾವೇರಿ ನಿಗಮದಿಂದ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಇನ್ನು ಈ ಬಾರಿ ಉತ್ತಮ ಮಳೆಯಾಗುತ್ತಿದೆ. ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲಸನ್ನಿಹಿತವಾಗಿದೆ. ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಆದರೂ ರೈತರಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದೇವೆ ಎಂದು ಹೇಳಿದರು.

Home add -Advt


Related Articles

Back to top button