Politics

*ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್ ಮಾಡಲು ಷಡ್ಯಂತ್ರ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸರ್ಕಾರದಲ್ಲಿರುವ ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ. ಹನಿಟ್ರ್ಯಾಪ್ ಮಾಡಿ ಒಂದು ವಿಕೇಟ್ ಬೀಳಿಸುವ ಷಡ್ಯಂತ್ರ ನಡೆಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಭಾವಿ ಸಚಿವರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿದೆ. ಸಚಿವ ತೇಜೋವಧೆ ಮಾಡುವ ಪ್ರಯತ್ನ ನಡೆಸಿದ್ದಾರೆ. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂದು ಹೇಳಿದರೆ ಅದು ರಾಜಕೀಯ ಆರೋಪವಾಗುತ್ತೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು,

ರಾಜಕೀಯ ಇಂದು ಕೆಳಮಟ್ಟಕ್ಕೆ ಹೋಗಿದೆ. ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಹನಿಟ್ರ್ಯಾಪ್ ನಡೆದಿತ್ತು. ಈಗ ನಮ್ಮ ಸಚಿವರ ವಿರುದ್ಧವೂ ಇಂತಹ ಯತ್ನ ನಡೆದಿದೆ. ಹನಿಟ್ರ್ಯಾಪ್ ಜಾಲ ನಿರಂತರವಾಗಿ ನಡೆಯುತ್ತಿದೆ. ಬಗ್ಗೆ ಎಲ್ಲಾ ಪಕ್ಷಗಳು ಚರ್ಚೆ ನಡೆಸಬೇಕು. ಹನಿಟ್ರ್ಯಾಪ್ ಜಾಲಕ್ಕೆ ಕಡಿವಾಣಬೀಳಬೇಕು ಎಂದರು.

Home add -Advt

Related Articles

Back to top button