Politics

*ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಿ: ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಲಿ ಎಂದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಲಿ ಎಂದು ಹೇಳಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸತೀಶ್ ಜಾರಕಿಹೊಳಿ, ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಿ. ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದರು.

ಪಾಪ್ಯುಲರ್ ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ. ಯಾರೇ ಅಧ್ಯಕ್ಷರಾದರೂ ವೋಟ್ ತರಬೇಕು ಅಂತವರನ್ನು ಮಾಡಿ. ಜಾತಿ ಲೆಕ್ಕಾಚಾರ ಇದ್ಯಾವುದೂ ಮುಖ್ಯವಲ್ಲ. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷರ ನೇಮಕವಾಗಬೇಕು. ಡಿ.ಕೆ. ಶಿವಕುಮಾರ್ ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕಾ? ಬೇಡವೇ ಎಂಬುದನ್ನು ಪಕ್ಷದ ಮೇಲ್ಮಟ್ಟದಲ್ಲಿ ಚರ್ಚೆಯಾಗಲಿ. ಈಗಿರುವ ಗೊಂದಲಗಳಿಗೆ ಇತಿಶ್ರ‍ೀ ಹಾಡಿ. ಡಿ.ಕೆ ಅವರೇ ಇರಬೇಕು ಎನ್ನುವುದಾದರೇ ಹೈಕಮಾಂಡ್ ಈ ಬಗ್ಗೆ ಸ್ಪಷ್ಟವಾಗಿ ಹೇಳಲಿ. ಈ ಬಗ್ಗೆ ನಾನು ಸುರ್ಜೇವಾಲಾ ಜೊತೆ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಗೊಂದಲಕ್ಕೆ ತೆರೆ ಎಳೆಯಿರಿ ಎಂದಿದ್ದೇನೆ ಎಂದು ಹೇಳಿದರು.

Related Articles

Back to top button