Karnataka NewsPolitics

*ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರ್ತಾರೆ; ಬದಲಾವಣೆ ಪ್ರಶ್ನೆ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಇದರಲ್ಲಿ ಬದಲಾವಣೆ ಪ್ರಶ್ನೆ ಇಲ್ಲ. 5 ವರ್ಷ ಸಿಎಂ ಆಗಿ ಇರ್ತಾರೋ, 3 ವರ್ಷ ಇರ್ತಾರೋ ಅದು ನನಗೆ ಗೊತ್ತಿಲ್ಲ. ನೀವು ಅದನ್ನು ಹೈಕಮಾಂಡ್ ಗೆ ಕೇಳಬೇಕು ಎಂದರು.

ನಾನು ಸಿದ್ದರಾಮಯ್ಯ ಅವರ ಜೊತೆಗೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆ ಉದ್ಭವಿಸಲ್ಲ. ವಿಪಕ್ಷ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತ್ತಿದ್ದಾರೆ. ಮಾತನಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ. ಅಂತಹ ಆಲೋಚನೆಯೂ ಇಲ್ಲ. ನಾನು ಇದನ್ನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.

Home add -Advt

Related Articles

Back to top button