Latest

ಭೀಕರ ಅಪಘಾತ; ಕಾರಲ್ಲಿದ್ದ ವ್ಯಕ್ತಿ ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿಕೊಂಡ ಬೆಂಕಿಯಿಂದಾಗಿ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ಸೀತಾನಗರ ಕ್ಯಾಂಪ್ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವವಾಗಿ ದಹನಗೊಂಡಿದ್ದಾರೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

Related Articles

Back to top button