Kannada NewsLatest

ಸವದತ್ತಿ ಕ್ಷೇತ್ರದಿಂದ ಸ್ಥಳೀಯರಿಗೆ ಆದ್ಯತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಕಾಂಗ್ರೆಸ್‌ ಸೀಟು ಗೆಲುವಿಗಾಗಿ ಈಗಾಗಲೇ ತಯಾರಿ ನಡೆಸಿದ್ದು, ಸವದತ್ತಿ ಕ್ಷೇತ್ರದಿಂದ ಸ್ಥಳೀಯರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಆದ್ಯತೆ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸುವುದು ಇನ್ನೂ ಚರ್ಚೆಯಾಗಿಲ್ಲ. ರಾಜಕೀಯ ಸನ್ನಿವೇಶದಲ್ಲಿ ಎನಾದರೂ ಆಗಬಹುದು, ಜನವರಿ ನಂತರ ಖಚಿತವಾಗಿ ಗೊತ್ತಾಗುತ್ತದೆ ಎಂದು ತಿಳಿಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳು ಬರಲಿದ್ದು, ಜಿಲ್ಲೆಯಲ್ಲೂ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಈಗ ಖಚಿತವಾಗಿ ಎನು ಹೇಳಲು ಸಾಧ್ಯವಿಲ್ಲ. ಅಭ್ಯರ್ಥಿಗಳ ಆಯ್ಕೆ ನಂತರ ಎಲ್ಲಾ ತಿಳಿಯುತ್ತದೆ ಎಂದರು.

ಸವದತ್ತಿಯಲ್ಲಿ ಇಬ್ಬರು ಕಾಂಗ್ರೆಸ್‌ ಅಭ್ಯರ್ಥಿಗಳು ಇದ್ದಾರೆ. ಹೀಗಾಗಿ ಕಳೆದ ಸಲ ಸೋಲಾಗಿದೆ. ಈ ಬಾರೀ ಒಬ್ಬರನ್ನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗುವುದು. ಇಬ್ಬರು ಅಭ್ಯರ್ಥಿಗಳಿಗೆ ಒಗ್ಗಟ್ಟಾಗಲು ಸೂಚಿಸಲಾಗಿದೆ. ಬಿಜೆಪಿಯ ಕೆಲವರು ಕಾಂಗ್ರೆಸ್‌ ಸೇರ್ಪಡೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಚುನಾವಣೆ ಸಮೀಪಿಸಿದಾಗ ಯಾರು ಯಾವ ಪಕ್ಷಕ್ಕೂ ಹೋಗಬಹುದು ಎಂದು ತಿಳಿಸಿದರು.

ಸಿದ್ದರಾಮೋತ್ಸವ ಕಾರ್ಯಕ್ರಮ ವೈಯಕ್ತಿಕವಾದ್ದು, ಸಿದ್ದರಾಮಯ್ಯನವರ ಅಭಿಮಾನಿಗಳು ಅದನ್ನು ಮಾಡುತ್ತಿದ್ದಾರೆ. ಅದರಿಂದ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ ಎಂದ ಅವರು, ಬಳ್ಳಾರಿ ನಾಲಾ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಸಭೆ ನಡೆಸಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.
ಮಹಿಳೆಗೆ ಯಶಸ್ವಿ ಬ್ರೇನ್ ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಿದ ಸಿದ್ದಗಿರಿ ಆಸ್ಪತ್ರೆ ವೈದ್ಯರ ತಂಡ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button