Kannada NewsLatest

ಸಾಮೂಹಿಕ ವಿವಾಹಕ್ಕೆ ಪ್ರೋತ್ಸಾಹ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಕರೆ

ಪ್ರಗತಿವಾಹಿನಿ ಸುದ್ದಿ; ಸವದತ್ತಿ: ದುಂದು ವೆಚ್ಚದ ಮದುವೆಗಳಿಂದ ಬಡವರಿಗಾಗುವ ಆರ್ಥಿಕ ಭಾರ ತಪ್ಪಿಸಲು ಅತ್ಯಂತ ಸರಳ ಉಚಿತ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ತಾಲೂಕಿನ ಮನಿಕಟ್ಟಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಯುವಕ ಮಂಡಳ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ದಿನದಲ್ಲಿ ಎಲ್ಲ ವೆಚ್ಚವೂ ಆಕಾಶದತ್ತ ಮುಖಮಾಡಿವೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಇಂಥ ಸಂದರ್ಭಗಳಲ್ಲಿ ಕುಟುಂಬದ ಮೇಲಿನ ಆರ್ಥಿಕ ಹೊರೆ ತಪ್ಪಿಸಲು ಸಾಮೂಹಿಕ ವಿವಾಹಕ್ಕೆ ಮೊರೆ ಹೋಗಬೇಕು. ಸಂಘಟನೆಗಳು ಸಹ ಇದಕ್ಕಾಗಿ ಪ್ರತಿ ವರ್ಷವೂ ವಿಶೇಷ ಯೋಜನೆ ರೂಪಿಸಬೇಕು ಎಂದರು.

ಸಮಾಜದಲ್ಲಿ ದುಂದು ವೆಚ್ಚ ಮಾಡದೇ ಸರಳ ರೀತಿ ಇಂತಹ ಮದುವೆ ಸಮಾರಂಭಗಳು ನಡೆಯಬೇಕು ಎಂದ ಅವರು, ಸಾಮೂಹಿಕ ವಿವಾಹಕ್ಕೆ ಸರ್ಕಾರದ ಸಹಾಯ ಕೂಡ ಸಿಗುತ್ತಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ವಿಶ್ವಾಸ ವ್ಯದ್ಯ ಸೇರಿದಂತೆ ವಾಲ್ಮೀಕಿ ಯುವಕ ಮಂಡಳಸದಸ್ಯರು ಇದ್ದರು.
ದೇವಸ್ಥಾನದ ಸ್ಲ್ಯಾಬ್ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button