Kannada NewsKarnataka News

ಕ್ಷೇತ್ರ ಸುತ್ತಾಡಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ಸತೀಶ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಂಗಳವಾರ  ವಿವಿಧೆಡೆ ಸುತ್ತಾಡಿ ಕೊರೋನಾ ಸಂಬಂಧ ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸಿದರು.

ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ ನೀಡಿದ್ದರು.

ಸ್ಥಳೀಯ ಆಸ್ಪತ್ರೆ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ಭೇಟಿ ನೀಡಿ, ಕೊರೋನಾ ಸಂಬಂಧ ಕೈಗೊಂಡಿರುವ ಮುನ್ನೆಚ್ಚರಿಕೆಗಳನ್ನು ವಿಚಾರಿಸಿದರು. ವೈದ್ಯರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು.

ಹಾಗೆಯೇ ಸಾರ್ವಜನಿಕರನ್ನು ಸಹ ಭೇಟಿ ಮಾಡಿ ಮನೆಯಲ್ಲೇ ಇದ್ದು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಅನಗತ್ಯವಾಗಿ ತಿರುಗಾಡಬಾರದು ಎಂದು ಸಲಹೆ ನೀಡಿದರು.

Home add -Advt

ಜಾರಕಿಹೊಳಿ ಕಳೆದ ಕೆಲವು ದಿನಗಳಿಂದ ಕ್ಷೇತ್ರದ ವಿವಿಧೆಡೆ ಜನರಿಗೆ ಮಾಸ್ಕ್ ಗಳನ್ನೂ ವಿತರಿಸಿದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button