ಮಹದಾಯಿ ಹೋರಾಟ ಪಕ್ಷದ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋವಿಡ್ ಕಡಿಮೆಯಾದ ಮೇಲೆ ಮುಂದಿನ ದಿನಗಳಲ್ಲಿ ಮೇಕೆದಾಟು ಹೋರಾಟದ ಮಾದರಿಯಲ್ಲಿಯೇ ಮಹದಾಯಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಹೋರಾಟ ಎಲ್ಲಿಂದ ಆರಂಭ ಮಾಡಬೇಕೆಂಬುವುದನ್ನು ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ, ರೂಪರೇಷೆ ತಯಾರಿಸಿ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಮೇಕೆದಾಟು ಡ್ಯಾಂ ನಿರ್ಮಾಣ ಬಗ್ಗೆ ಈಗಾಗಲೇ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯಲಾಗಿದ್ದು, ಹೋರಾಟ ಅರ್ಧಕ್ಕೆ ನಿಂತಿಲ್ಲ. ಅದು ಯಶ್ವಸಿಯಾಗಿದೆ ಎಂದು ತಿಳಿಸಿದರು.
ಗೋವಾದಲ್ಲಿ ಚುನಾವಣಾ ಉಸ್ತುವರಿಯಾದ ದಿನೇಶ್ ಗೂಂಡುರಾರ್ ನೇತೃತ್ವದಲ್ಲಿ ನಮ್ಮ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ತಯಾರಿ ನಡೆಸಿದ್ದೇವೆ. ಇಪ್ಪತ್ತು ಕ್ಷೇತ್ರಗಳಲ್ಲಿ ನಾನು ಬಹಿರಂಗ ಪ್ರಚಾರ ನಡೆಸುತ್ತೇನೆ ಎಂದರು.
ಬೆಳಗಾವಿಯಲ್ಲಿ ಖಾಸಗಿ ಮಾರುಕಟ್ಟೆ ಆರಂಭದಿಂದ ರೈತರಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಆದರೆ ಖಾಸಗಿ ಮಾರುಕಟ್ಟೆ ಪರ ಸರ್ಕಾರ ನಿಂತಿದೆ. ಅದನ್ನು ಸರ್ಕಾರವೇ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ಮೇಯರ್ ಆಯ್ಕೆ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಪಾಲಿಕೆಯಲ್ಲಿ ಈಗಾಗಲೇ ಅನಧಿಕೃತ ಮೇಯರ್, ಉಪ ಮೇಯರ್ ಇದ್ದಾರೆ, ಮೇಯರ್ ಶಾಸಕರಾದ ಅಭಯ ಪಾಟೀಲ್, ಉಪ ಮೇಯರ್ ಅನಿಲ ಬೆನಕೆಯವರ ಕೈಯಲ್ಲಿ ಆಡಳಿತ ವಿದೆ ಎಂದ ಅವರು ಇನ್ನುಳಿದವರು ಟೀ, ಬಿಸ್ಕೇಟ್ ಗೆ ಸೀಮಿತವಾಗಲಿದ್ದಾರೆ ಎಂದು ಲೇವಡಿ ಮಾಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಮಾಜಿ ಸಚಿವ ಎ.ಬಿ. ಪಾಟೀಲ್, ಬಾಗಲಕೋಟೆ ಜಿಪಂ ಮಾಜಿ ಉಪಾಧ್ಯಕ್ಷ ಸುಶೀಲ್ ಬೆಳಗಲಿ ಸೇರಿದಂತೆ ಇತರರು ಇದ್ದರು.
ಆಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ