Belagavi NewsBelgaum NewsKarnataka NewsPolitics

*30 ಕೋಟಿ ರೂ. ಬೆಲೆಯ ನೂತನ ಹೆಲಿಕಾಪ್ಟರ್ ಖರೀದಿಗೆ ಮುಂದಾದ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಅನ್ನು ಸಚಿವ ಸತೀಶ್‌ ಜಾರಕಿಹೊಳಿ ಖರೀದಿಸಲು ಮುಂದಾಗಿದ್ದಾರೆ.

ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ. ಆಗಿದ್ದು ಅಗಸ್ಟ್ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್‌ ಜಾರಕಿಹೊಳಿ ಅವರು ಈ ಹಿಂದೆ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಹೊಂದಿದ್ದರು. 2028 ರ ಚುನಾವಣೆಗೆ ಪಕ್ಷ ಸಂಘಟನೆಗೆ ಮುಂದಾಗಿರುವ ಸಚಿವ ಸತೀಶ ಜಾರಕಿಹೊಳಿ ಅವರು, ನೂತನ ಹೆಲಿಕಾಪ್ಟರ್ ಖರೀದಿಗೆ ಮುಂದಾಗಿದ್ದಾರೆ.

ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್‌ ಪರಿಶೀಲನೆ ನಡೆಸಿದ್ದಾರೆ.‌

ಡಿಸಿಸಿ ಬ್ಯಾಂಕ್ ಚುನಾವಣೆ ಜಿದ್ದಾಜಿದ್ದಿ ನಡುವೆ ಮುಂದಿನ ವಿಧಾನಸಭೆ ಚುನಾವಣೆಗೆ ಸತೀಶ್ ತಯಾರಿ ನಡೆಸುತ್ತಿದ್ದಾರೆ.‌ ಸಮಯ ಉಳಿತಾಯ ಮಾಡಲು ಹೆಲಿಕಾಪ್ಟರ್ ಖರೀದಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ತಮ್ಮ ಬೆಂಬಲಿಗರೊಂದಿಗೆ ಹೆಲಿಕಾಪ್ಟರ್ ತಯಾರಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button