Belagavi NewsBelgaum NewsKannada NewsKarnataka NewsNationalPolitics

*ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವರ ಉತ್ತರಾಧಿಕಾರಿಯಾಗಬೇಕು: ಯತೀಂದ್ರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ‘ನನ್ನ ತಂದೆಯವರು ರಾಜಕೀಯ ಕೊನೆಗಾಲದಲ್ಲಿದ್ದಾರೆ. ನಮ್ಮ ರಾಜ್ಯಕ್ಕೆ ಪ್ರಗತಿಪರ ತತ್ವ ಸಿದ್ಧಾಂತ ಇರುವ ನಾಯಕರು ಬೇಕು. ಸತೀಶ್ ಜಾರಕಿಹೊಳಿ ಈ ಜವಾಬ್ದಾರಿ ವಹಿಸಿಕೊಳ್ಳಬೇಕು. ಅವರನ್ನು ಎಲ್ಲ ನಾಯಕರೂ ಒಪ್ಪಿಕೊಳ್ಳುತ್ತಾರೆ ‘ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಗೋಕಾಕ ತಾಲೂಕಿನ ಕಪ್ಪಲಗುದ್ದಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯನವರ ರೀತಿ ಪ್ರಗತಿಪರ ವಿಚಾರಧಾರೆ ಹೊಂದಿರುವವರು. ಅವರನ್ನು ಕಾಂಗ್ರೆಸ್ ನ ಎಲ್ಲ ನಾಯಕರೂ ಒಪ್ಪಿಕೊಳ್ಳುತ್ತಾರೆ. ಅಂತಹ ಜವಾಬ್ದಾರಿಯನ್ನು ಅವರು ವಹಿಸಿಕೊಳ್ಳಬೇಕು ಎಂದರು.

Home add -Advt

Related Articles

Back to top button