Latest

ಶಾಸಕ ಸತೀಶ್ ರೆಡ್ಡಿ ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ಸತೀಶ್ ರೆಡ್ದಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಐಷಾರಾಮಿ ಕಾರುಗಳು ಸಂಪೂರ್ಣ ಸುಟ್ಟುಭಸ್ಮವಾಗಿವೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರ ಮನೆ ಮುಂದೆ ನಿಲ್ಲಿಸಿದ್ದ ಫಾರ್ಚೂನ್ ಕಾರು ಸೇರುದಂತೆ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಪಕ್ಕದಲ್ಲಿಯೇ ಇದ್ದ ಸತೀಶ್ ರೆಡ್ಡಿ ಕಾರು ಸುರಕ್ಷಿತವಾಗಿದೆ ಎನ್ನಲಾಗಿದೆ.

Home add -Advt

ತಡರಾತ್ರಿ 1ಗಂಟೆ 23 ನಿಮಿಷಕ್ಕೆ ಇಬ್ಬರು ದುಷ್ಕರ್ಮಿಗಳು ಆಗಮಿಸಿದ್ದು, 7 ನಿಮಿಷಗಳಲ್ಲಿ ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ದುಷ್ಕರ್ಮಿಗಳ ಕೆಲಸ ಸೆರೆಯಾಗಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತಂಡ ರಚನೆ ಮಾಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

Related Articles

Back to top button