
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಇಂದು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಸತೀಶ್ ಸೈಲ್ ಮನೆ ಮೇಲೆ ಇತ್ತೀಚೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹಣ ಸೇರಿದಂತೆ 14.13 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದರು.