
ಪ್ರಗತಿವಾಹಿನಿ ಸುದ್ದಿ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ಬೆಂಗಳೂರಿನ ಜನಪ್ರತಿಇಧಿಗಳ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದೆ.
ಶಾಸಕ ಸತೀಶ್ ಸೈಲ್ ಅವರು ಹಲವು ಬಾರಿ ವಿಚಾರಣೆಗೆ ಹಾಗಜರಾಗಿಲ್ಲ. ಅಲ್ಲದೇ ಇಂದು ಪ್ರಕರಣದ ಎಲ್ಲಾ ಆರೋಪಿಗಳು ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾಗಿದ್ದರೂ ಮೊದಲ ಆರೋಪಿಯಾಗಿರುವ ಸತೀಶ್ ಸೈಲ್ ವಿಚಾರಣೆಗೆ ಗೈರಾಗಿದ್ದಾರೆ. ಅವರ ಪರ ವಕೀಲರು ಬೇರೊಂದು ನ್ಯಾಯಾಲಯದಲ್ಲಿ ಕಾರ್ಯನಿಮಿತ್ತ ಕೆಲಸದಲ್ಲಿರುವುದರಿಂದ ವಿಚಾರಣೆ ಮುಂದೂಡುವಂತೆ ಕೋರಿದ್ದರು. ಇದರಿಂದ ಗರಂ ಆದ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶರು ಶಾಸಕ ಸತೀಶ್ ಸೈಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.


