Karnataka NewsLatestPolitics

*ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಮಧ್ಯಂತರ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಶಾಸಕರಿಗೆ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ನಿನ್ನೆಯಷ್ಟೇ ನ್ಯಾಯಾಲಯ ಅವರನ್ನು 2 ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿತ್ತು. ಇಡಿ ಕಸ್ಟಡಿಯಲ್ಲಿದ್ದ ಸತೀಶ್ ಸೈಲ್ ಅನಾರೋಗ್ಯಕ್ಕೀಡಾಗಿದ್ದಾರೆ. ಉಸಿರಾಟದ ತೊಂದರೆ, ಮಧುಮೇಹದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

7 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದ್ದು, ಸತೀಶ್ ಸೈಲ್ ಚಿಕಿತ್ಸೆಗೆ ದಾಖಲಾಗುವ ಸಾಧ್ಯತೆ ಇದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button