Karnataka NewsLatestPolitics

*BREAKING: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

6 ಕಾರುಗಳಲ್ಲಿ 24 ಕ್ಕೂ ಅಧಿಕ ಅಧಿಕಾರಿಗಳು ಶಾಸಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಯಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಲೋಕಾಯುಕ್ತ ನ್ಯಾ.ಸಂತೀಷ್ ಹೆಗಡೆ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

ಅಕ್ರಮ ಅದಿರು ಸಾಗಾಟ ಕೇಸ್ ನಲ್ಲಿ ಈ ಹಿಂದೆ ಜೈಲುಶಿಕ್ಷೆ ಅನುಭವಿಸಿದ್ದ ಶಾಸಕ ಸತೀಶ್ ಸೈಲ್, ಜಾಮೀನು ಮೇಲೆ ಬಿಡುಗಡೆಯಾಗಿ ಹೊರಬಂದಿದ್ದರು. ಅಧಿವೇಶನ ಹಿನ್ನೆಲೆಯಲ್ಲಿ ಶಾಸಕರು ಬೆಂಗಳೂರಿನಲ್ಲಿರುವಾಗಲೇ ಅತ್ತ ಸತೀಶ್ ಸೈಲ್ ಮನೆ ಮೇಲೆ ದಾಳಿ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button