
ಪ್ರಗತಿವಾಹಿನಿ ಸುದ್ದಿ: ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬಂಧಿತ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಶಾಸಕ ಸತೀಶ್ ಸೈಲ್ ಅವರನ್ನು ಸೆ.12ರವರೆಗೆ ಎರಡು ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ.