Belagavi NewsBelgaum NewsKannada NewsKarnataka NewsNational
*ಸತೀಶ್ ಸಿಎಂ ಆಗಲಿ: ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದ ಅಭಿಮಾನಿ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಅಭಿಮಾನಿಗಳು ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಣೆಯನ್ನು ಕೂಗಿದ್ದು ಮಾತ್ರವಲ್ಲ, ಬಾಳೆಹಣ್ಣಿನ ಮೇಲೂ ಬರೆದು ರಥಕ್ಕೆ ಎಸೆಯುವ ಮೂಲಕ ಪ್ರಾರ್ಥಿಸಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರದ ಹಂಚಿಕೆ ಚರ್ಚೆಯ ಬೆನ್ನಿಗೇ, ಸಿಎಂ ಸಿದ್ದರಾಮಯ್ಯ ಅವರು ನವೆಂಬರ್ ವೇಳೆಗೆ ಸಿಎಂ ಕುರ್ಚಿಯಿಂದ ಕೆಳಗೆ ಇಳಿಯಲಿದ್ದಾರೆ ಎಂದುವಿಪಕ್ಷ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಇದರ ಬೆನ್ನಲ್ಲೇ ದಲಿತ ಸಿಎಂ ಕೂಗು ಸಹ ಹುಟ್ಟಿಕೊಂಡಿದ್ದು, ಈ ಮಧ್ಯೆ, ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಅಭಿಮಾನಿಗಳು ಬಾಳೆ ಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದು ದೇವರಲ್ಲಿ ಪ್ರಾರ್ಥಿಸಿದ್ದಾರೆ.