Kannada NewsKarnataka News

*ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ*

ಕಡೋಲಿಯಲ್ಲಿ ಎಂಇಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದವರಿಗೆ ಸನ್ಮಾನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಳೆದ 15 ವರ್ಷಗಳ ಅವಧಿಯಲ್ಲಿ ಶಾಸಕರಾಗಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆ. ಕಡೋಲಿ ಗ್ರಾಮದ ವಿವಿಧ ಸಂಘಟನೆಗಳು ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಈ ಭಾರೀಯ ಚುನಾವಣೆಯಲ್ಲಿ ಸರ್ವಾನುಮತದಿಂದ ಬೆಂಬಲಿಸುತ್ತಿರುವುದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ಯಮಕನಮರಡಿ ಮತಕ್ಷೇತ್ರದ ಕಡೋಲಿ ದುರುದುಂಡೀಶ್ವರ ವಿರಕ್ತಮಠದ ಆವರಣದಲ್ಲಿ ನಡೆದ ಸಭೆಯಲ್ಲಿ ಎಂಇಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ 400ಕ್ಕೂ ಹೆಚ್ಚು ಜನರನ್ನುಸನ್ಮಾನಿಸಿ ಮಾತನಾಡಿದ ಅವರು, ಯಮಕನಮರಡಿ ಮತಕ್ಷೇತ್ರದ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇತ್ತು. ಆದರೆ ಮಾರ್ಕಂಡೇಯ ನದಿಗೆ ಬ್ರಿಜ್ ಕಂ ಬ್ಯಾರೆಜ್ ನಿರ್ಮಿಸಿ ನೀರಿನ ಸಮಸ್ಯೆ ನಿವಾರಣೆ ಮಾಡಿದ್ದು ನಿಮಗೆ ಗೊತ್ತಿದೆ. ಮುಂದೆಯೂ ನಿಮ್ಮ ಸಮಸ್ಯೆ ಗಳಿಗೆ ಸ್ಪಂದಿಸುವ ಕೆಲಸವನ್ನು ಸದಾ ಮಾಡುತ್ತೇನೆಂದು ತಿಳಿಸಿದರು.

ನಮ್ಮ ಅಧಿಕಾರದ ಅವಧಿಯಲ್ಲಿ ಮೂಲಸೌಕರ್ಯಗಳು ಒದಗಿಸಿದ್ದು, ಕ್ಷೇತ್ರದಲ್ಲಿ ಶೈಕ್ಷಣಿಕ ಸುಧಾರಣೆಗೆ ಆದ್ಯತೆ ನೀಡಿದ್ದೇವೆ. ಶಿಕ್ಷಣ ಕ್ರಾಂತಿಯನ್ನು ಮಾಡಲಾಗಿದೆ. 15 ವರ್ಷಗಳ ಹಿಂದೆ ಇದ್ದ ಸ್ಥಿತಿ ಈಗ ಯಮಕನಮರಿಯಲ್ಲಿ ಇಲ್ಲ. ನಿಮಗೆ ತಿಳಿದ ಹಾಗೆ ಸಾಕಷ್ಟು ಸುಧಾರಣೆ ಕಂಡಿದೆ ಎಂದು ತಿಳಿಸಿದರು.

ವಸಂತ ಮಾಯಣ್ಣಾ ಮಾತನಾಡಿ, ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕರ್ನಾಟಕದಲ್ಲಿ ಎಲ್ಲಾ ಅಭ್ಯರ್ಥಿಗಳಿಗಿಂತ ಭಾರೀ ಅಂತರದಿಂದ ಗೆಲ್ಲಿಸೋಣ. ಅವರ ಅಭಿವೃದ್ಧಿ ಕಾರ್ಯಗಳಿಂದ ಕಡೋಲಿ ಗ್ರಾಮದ ಎಲ್ಲ ಮತದಾರರು ಅವರ ಪರವಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಸಭೆಗೂ ಮುನ್ನ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಗ್ರಾಮದಲ್ಲಿನ ಶಿವಾಜಿ ಮೂರ್ತಿಗೆ ಹಾರ ಹಾಕಿ ನಮಿಸಿದರು. ನಂತರ ದುರುದುಂಡೀಶ್ವರ ವಿರಕ್ತಮಠದ ಗುರುಬಸವಲಿಂಗ ಸ್ವಾಮೀಜಿ ಅವರನ್ನು ಸತ್ಕರಿಸಿದರು.

ಇದೇ ವೇಳೆ ಕಡೋಲಿ ಗ್ರಾಮದ ವಿವಿಧ ಸಂಘಟನೆಗಳ ಸದಸ್ಯರು ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಎಂಇಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ 400ಕ್ಕೂ ಹೆಚ್ಚು ಜನರನ್ನು ಶಾಸಕರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಉದಯ ಸಿದ್ದಣ್ಣವರ್, ಗ್ರಾಮ ಸದಸ್ಯರಾದ ಸಂಜಯ ಜಾಧವ್‌, ದೀಪಕ್‌ ಮರಗಾಳೆ ಮೊದಲಾದವರು ಉಪಸ್ಥಿತರಿದ್ದರು.

https://pragati.taskdun.com/umashreefirmaski-stationvidhanasabha-election/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button