Latest

ಕೊವಿಡ್ ಬಳಿಕ ಮತ್ತೆ ಅನಾರೋಗ್ಯಕ್ಕೀಡಾದ ಕೇಂದ್ರ ಗೃಹ ಸಚಿವ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಇದೀಗ ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಮಿತ್ ಶಾ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಉಸಿರಾಟದ ಸಮಸ್ಯೆ ಕೂಡ ಕಾಡುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Home add -Advt

ಆಗಸ್ಟ್​ 2ರಂದು ಅಮಿತ್​ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್​ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದರು. ಬಳಿಕ ಚಿಕಿತ್ಸೆ ಪಡೆದು ಆಗಸ್ಟ್ 14ರಂದು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದರು.

Related Articles

Back to top button