Latest

ಸತ್ಯಭಾಮ ಚಂದ್ರಶೇಖರ್ ಕಂಬಾರ ನಿಧನಕ್ಕೆ ಸಿಎಂ ಸಂತಾಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಧರ್ಮಪತ್ನಿ ಸತ್ಯಭಾಮ ಚಂದ್ರಶೇಖರ್ ಕಂಬಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದರು. ಅವರಿಗೆ ಅಪಾರವಾದ ಓದಿನ ಹವ್ಯಾಸವಿತ್ತು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು.

Home add -Advt

ಸತ್ಯಭಾಮ ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕೋರುತ್ತೇನೆ ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.
ಸಾಹಿತಿ ಚಂದ್ರಶೇಖರ ಕಂಬಾರ ಪತ್ನಿ ಸತ್ಯಭಾಮ ವಿಧಿವಶ

Related Articles

Back to top button