Belagavi NewsBelgaum NewsKannada NewsKarnataka NewsLatestPolitics

*ಬಜೆಟ್ ನಲ್ಲಿ ರೂ.5.50 ಕೋಟಿ ಅನುದಾನ ಮೀಸಲಿಡಲು ಮನವಿ*

ಮುಖ್ಯಮಂತ್ರಿಗೆ ಪತ್ರ ಬರೆದ ಸಚಿವ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಇಡೀ ವರ್ಷ “ ಸತ್ಯ ಪ್ರಭೆ-2026 ” ವೈಜ್ಞಾನಿಕ ಜಾಗೃತಿ ಕಾರ್ಯಕ್ರಮಗಳಿಗಾಗಿ ಬಜೆಟ್ ನಲ್ಲಿ ರೂ.5.50 ಕೋಟಿ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾದ್ಯಂತ ಇಡೀ ವರ್ಷ “ಸತ್ಯ ಪ್ರಭೆ-2026” ಹೆಸರಿನಲ್ಲಿ 31 ಜಿಲ್ಲೆಗಳು, 239 ತಾಲ್ಲೂಕುಗಳು, 6022 ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕ ಜಾಗೃತಿ ಜಾಥಾ ನಡೆಸಲು ಕ್ರಿಯಾ ಯೋಜನೆ ರೂಪಿಸಿದೆ. ಇದಕ್ಕೆ ಬೇಕಾದ 5 ಕೋಟಿ 50 ಲಕ್ಷ ರೂಪಾಯಿ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡುವಂತೆ ಮುಖ್ಯಮಂತ್ರಿಯವರಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ಮತ್ತು ಪದಾಧಿಕಾರಿಗಳು ಭೇಟಿ ಮಾಡಿ, ರಾಜ್ಯದಲ್ಲಿ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮಗಳಿಗಾಗಿ ಬಜೆಟ್ ನಲ್ಲಿ ಅನುದಾನ ನೀಡಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರಿಗೆ ಪತ್ರ ಬರೆದು ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಕೋರಿಕೊಂಡಿದ್ದಾರೆ.

Home add -Advt

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ಸಾರ್ವಜನಿಕರಲ್ಲಿ ಸದಾ ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ಜನರಲ್ಲಿ ವೈಜ್ಞಾನಿಕ ಜಾಗೃತಿಗೊಳಿಸುವುದು ಆದ್ಯ ಕರ್ತವ್ಯವಾಗಿದೆ. 2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಇಡೀ ವರ್ಷ “ ಸತ್ಯ ಪ್ರಭೆ-2026 ಹೆಸರಿನಲ್ಲಿ 31 ಜಿಲ್ಲೆಗಳು, 239 ತಾಲ್ಲೂಕುಗಳು, 6022 ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕ ಜಾಗೃತಿ ಜಾಥಾ ನಡೆಸಲು 550 ಲಕ್ಷ ರೂಪಾಯಿ ಅನುದಾನವನ್ನು ಮಾರ್ಚ್ ತಿಂಗಳ ಬಜೆಟ್ ನಲ್ಲಿ ಮೀಸಲಿಡಲು ಸಚಿವ ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.

Related Articles

Back to top button