Belagavi NewsBelgaum NewsCrimeKannada NewsKarnataka NewsNationalPoliticsTravel

*ಸವದತ್ತಿ ಬಿಜೆಪಿ ಅಧ್ಯಕ್ಷ ವಿರೂಪಾಕ್ಷ ಮಾಮನಿಗೆ ಅಪಘಾತ*: *ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಬಿಜೆಪಿ ಸವದತ್ತಿ ತಾಲೂಕು ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ತಮ್ಮ ಇನೋವಾ ಕಾರಿನಿಂದ ಇಳಿದು ಮೂರ್ತಿ ವಿಸರ್ಜನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಯಲ್ಲಮ್ಮನಗುಡ್ಡದಿಂದ ನವಲಗುಂದದತ್ತ ಸಾಗುತ್ತಿದ್ದ ಬಲೇನೋ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ವಿರೂಪಾಕ್ಷ ಮಾಮನಿ ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದ ವಿರೂಪಾಕ್ಷ ಮಾಮನಿ ಅವರಿಗೆ ಅಪಘಾತ ಸಂಭವಿಸಿರುವುದು ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.

ಈ ಘಟನೆ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button