ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಪ್ರಸಿದ್ಧ ಯಾತ್ರಾ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಫೆಬ್ರವರಿ 1ರಿಂದ ಭಕ್ತರಿಗೆ ಮುಕ್ತವಾಗಲಿದೆ.
ಕೊರೋನಾ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಿಯ ದರ್ಶನವನ್ನು ಕಳೆದ 10 ತಿಂಗಳಿನಿಂದ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಫೆಬ್ರವರಿ 1ರಿಂದ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಈ ಕುರಿತು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕೊಟಾರಗಸ್ತಿ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಜನರು ಸವದತ್ತಿ ಯಲ್ಲಮ್ಮ ದೇವಿಯ ಭಕ್ತರಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಭರತ ಹುಣ್ಣಿಮೆ ಜಾತ್ರೆ ಇರುವುದರಿಂದ ಪ್ರತಿ ವರ್ಷ 4 -5 ಲಕ್ಷ ಜನರು ಸೇರುತ್ತಾರೆ.
ದೇವಿಯ ದರ್ಶನಕ್ಕೆ ಕೆಲವು ಮಾರ್ಗದರ್ಶಿ ಸೂತ್ರಗಳನ್ನು ವಿಧಿಸಲಾಗಿದೆ. ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – Opening of Shri Renuka Devi Darshan at Yallanmangudda, Tal Savadatti
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ