*ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ*
ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಒತ್ತಾಯ
ಪ್ರಗತಿವಾಹಿನಿ ಸುದ್ದಿ: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ವತಿಯಿಂದ 25 ಕೋಟಿ ರೂಪಾಯಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಪ್ರಥಮ ಸಭೆಯಲ್ಲಿ ಮಾತನಾಡಿದ ಸಚಿವರು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕೆಂದು ಹೇಳಿದರು.
ಭಕ್ತಾಧಿಗಳು ಪಡ್ಡಲಗಿ ತುಂಬಿಸಿ ಜೋಗತಿಯರಿಗೆ ನೈವೇದ್ಯ ಸಮರ್ಪಿಸುತ್ತಾರೆ. ಜನಸಂದಣಿ ಹೆಚ್ಚಾಗಿರುವಾಗ ದರ್ಶನ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಎಲ್ಲರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಜರಾಯಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ, ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ್, ವಾಯವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ಶಾಸಕರಾದ ವಿಶ್ವಾಸ್ ವೈದ್ಯ, ಬಾಬಾಸಾಹೇಬ್ ಪಾಟೀಲ, ಆಸಿಫ್(ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿ.ರಾಜೇಂದ್ರ, ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ