Kannada NewsKarnataka NewsPolitics

*ಹಾಜರಾತಿ ಹಾಕುವಾಗ ‘ಎಸ್ ಸರ್’ ಬದಲು ‘ಜೈ ಶ್ರೀರಾಮ್’ ಹೇಳಿ: ಯತ್ನಾಳ್ ಕರೆ*

ಪ್ರಗತಿವಾಹಿನಿ ಸುದ್ದಿ: ಜೂನ್‌ನಲ್ಲಿ ಶಾಲೆಗಳು ಆರಂಭವಾದ ಬಳಿಕ ಪ್ರತಿಯೊಬ್ಬರಿಗೂ ಕೇಸರಿ ಶಾಲು ವಿತರಿಸುವುದಾಗಿ ಹಾಗೂ ಶಾಲೆಯಲ್ಲಿ ಹಾಜರಾತಿ ಹಾಕುವಾಗ ‘ಎಸ್ ಸರ್’ ಬದಲು ‘ಜೈ ಶ್ರೀರಾಮ್’ ಎನ್ನಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಅಲ್ಲದೆ, ಶಿಕ್ಷಕರಿಗೆ ನಮಸ್ಕರಿಸುವಾಗಲೂ ‘ಜೈ ಶ್ರೀರಾಮ್’ ಎನ್ನಬೇಕು ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿರುವ ಅವರು, ಕೇಸರಿ ಶಾಲು ಧರಿಸುವುದಕ್ಕೆ ನಿಷೇಧ ಹೇರಲು ಕಾಂಗ್ರೆಸ್‌ನವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದ ಯತ್ನಾಳ್, ಕೇಸರಿ ಶಾಲು ಹಾಕಲು ನಮಗೆ ಹಕ್ಕಿದೆ ಎಂದು ಪ್ರತಿಪಾದಿಸಿದರು.

ಕೇಸರಿ ಶಾಲು ಧರಿಸುವುದಕ್ಕೆ ನಿಷೇಧ ಹೇರಲು ಕಾಂಗ್ರೆಸ್‌ನವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದ ಯತ್ನಾಳ್, ಕೇಸರಿ ಶಾಲು ಹಾಕಲು ನಮಗೆ ಹಕ್ಕಿದೆ ಎಂದರು.

ರಾಜ್ಯದ ಎಲ್ಲಾ ಹಿಂದೂಗಳಿಗೆ ಕರೆ ಕೊಟ್ಟಿರುವ ಅವರು, “ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ತಿಲಕ ಇಟ್ಟು ಕೇಸರಿ ಶಾಲು ಹಾಕಿ ಶಾಲೆಗೆ ಕಳುಹಿಸಿ. ಇವರು ಹೇಗೆ ವಿರೋಧ ಮಾಡುತ್ತಾರೆ? ಹೇಗೆ ತಡೆಯುತ್ತಾರೆ? ನಾವು ನೋಡುತ್ತೇವೆ” ಎಂದು ಸವಾಲು ಹಾಕಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button