Karnataka News

*SBI ಬ್ಯಾಂಕ್ ನಲ್ಲಿ ಕೋಟ್ಯಂತರ ರೂಪಾಯಿ ಕಳ್ಳತನ; ಕಿಟಕಿ ಮುರಿದು ಬ್ಯಾಂಕ್ ದೋಚಿದ ಕಳ್ಳರು*

ಪ್ರಗತಿವಾಹಿನಿ ಸುದ್ದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಕಿಟಕಿಗಳನ್ನು ಮುರಿದು, ಕಳ್ಳರು ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ನ್ಯಾಮತಿ ಮುಖ್ಯರಸ್ತೆಯಲ್ಲಿರುವ ಎಸ್ ಬಿಐ ಬ್ಯಾಂಕ್ ಶಾಖೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳು ಬ್ಯಾಂಕ್ ಕಿಟಕಿ ಮುರಿದು ಒಳ ನುಗ್ಗಿದ್ದಾರೆ. ಬ್ಯಾಂಕ್ ಒಳಗಡೆ ತಡಕಾಡಿದ್ದು, ಲಾಕರ್ ನಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

Home add -Advt

ಕೋಟ್ಯಂತರ ರೂಪಾಯಿ ಹಣ, ಒಡವೆ ಕಳ್ಳತನವಾಗಿರುವ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button