
ಪ್ರಗತಿವಾಹಿನಿ ಸುದ್ದಿ; ಮೈಸೂರು: ಎಲ್ಲೆಲ್ಲೂ ಯುಗಾದಿ ಹಬ್ಬದ ಸಡಗರ ಸಂಭ್ರಮ. ಈ ಸಡಗರದ ನಡುವೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ಇಳಿದ ವ್ಯಕ್ತಿಯೋರ್ವರು ದುರಂತಕ್ಕೀಡಾಗಿದ್ದಾರೆ.
ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಯುಗಾದಿ ಹಿನ್ನೆಲೆಯಲ್ಲಿ ಪುಣ್ಯಸ್ನಾನಕ್ಕೆ ಎಂದು ನದಿಗಿಳಿದ ಎಸ್ ಬಿಐ ನೌಕರ ಗಂಗಾಧರ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಗಂಗಾಧರ್ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ನಿವಾಸಿ. ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಆಗಮಿಸಿದ್ದು, ಅದರಂತೆ ಗಂಗಾಧರ್ ಕೂಡ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನೀರಿಗಿಳಿದಿದ್ದಾರೆ. ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ