ಪ್ರಗತಿವಾಹಿನಿ ಸುದ್ದಿ, ಮುಂಬೈ – ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಫೆಬ್ರವರಿ 15ರ ವರೆಗೆ ಶಾಲೆ, ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಮತ್ತು ಒಮೈಕ್ರಾನ್ ಹೆಚ್ಚುತ್ತಿದೆ. ದಿನವೊಂದಕ್ಕೆ 50 ಸಾವರದ ಹತ್ತಿರ ಕೇಸ್ ಪತ್ತೆಯಾಗುತ್ತಿದೆ. ಫೆಬ್ರವರಿಯಲ್ಲಿ ಲಕ್ಷ ದಾಟಬಹುದು ಎನ್ನುವ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಈಗಾಗಲೆ ಜಾರಿಗೊಳಿಸಲಾಗಿದ್ದು, ಎಲ್ಲೆಡೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ.
ಒಂದು ತಿಂಗಳ ಕಾಲ ಶಾಲೆ, ಕಾಲೇಜುಗಳನ್ನು ಮುಚ್ಚಲು ನಿರ್ಧರಿಸಲಾಗಿದ್ದು, ಮಕ್ಕಳಿಗೆ ಕೊರೋನಾ ಹರಡದಂತೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ.
ರಾಜ್ಯಾದ್ಯಂತ ಶಾಲೆಗಳು ಬಂದ್ ಸಾಧ್ಯತೆ : ಶಿಕ್ಷಣ ಇಲಾಖೆಯಿಂದ ಆಗಲೇ ಸಿದ್ಧತೆ; ಎಲ್ಲ ಜಿಲ್ಲೆಗಳಿಗೆ ಸುತ್ತೋಲೆ ರವಾನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ