
ಪ್ರಗತಿವಾಹಿನಿ ಸುದ್ದಿ: ಶಾಲಾ ವಾಹನ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಈ ದುರಂತ ಸಂಭವಿಸುದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರೈಲು ಸಂಚಾರದ ವೇಳೆ ರೈಲ್ವೆ ಗೇಟ್ ಹಾಕಿರಲಿಲ್ಲ. ವೇಗವಾಗಿ ಬಂದ ಶಾಲಾ ಬಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.