LatestNational

*ಶಾಲಾ ವಾಹನ-ರೈಲು ಭೀಕರ ಅಪಘಾತ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಶಾಲಾ ವಾಹನ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಈ ದುರಂತ ಸಂಭವಿಸುದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರೈಲು ಸಂಚಾರದ ವೇಳೆ ರೈಲ್ವೆ ಗೇಟ್ ಹಾಕಿರಲಿಲ್ಲ. ವೇಗವಾಗಿ ಬಂದ ಶಾಲಾ ಬಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button