Kannada NewsKarnataka NewsLatest
*ಶಾಲಾ ಬಸ್ ಪಲ್ಟಿ: 25 ಮಕ್ಕಳಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಶಾಲಾ ಬಸ್ ಪಲ್ಟಿಯಾಗಿ ಬಿದ್ದು 25 ಮಕ್ಕಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದಲ್ಲಿ ನಡೆದಿದೆ.
ಭದ್ರಾವತಿಯ ಸ್ಫೂರ್ತಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿದ ಶಾಲಾ ಬಸ್ ಪಲ್ಟಿಯಾಗಿದೆ. ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಬಿಟ್ಟುಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದಿದೆ.
ಗಾಯಾಳು ಮಕ್ಕಳನ್ನು ಭದ್ರಾವತಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರವಾತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




