
ಪ್ರಗತಿವಾಹಿನಿ ಸುದ್ದಿ: ಶಾಲಾ ಬಸ್ ಪಲ್ಟಿಯಾಗಿ ಬಿದ್ದು 6 ಮಕ್ಕಳು ಸಾವನ್ನಪ್ಪಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.
ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 40 ವಿದ್ಯಾರ್ಥಿಗಳಿದ್ದರು. ಅಪಘಾತದಲ್ಲಿ 6 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಗಳಿಗೆ ರಜೆ ಇದ್ದರೂ ಕೂಡ ಶಾಲೆಗೆ ಮಕ್ಕಳನ್ನು ಕರೆದೊಯ್ಯಲಾಗುತ್ತಿತ್ತು. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ