
ಪ್ರಗತಿವಾಹಿನಿ ಸುದ್ದಿ: ಶಾಲಾ ವಾಹನ ಹಾಗೂ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಭೀಕರ ಅಪಘತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ನಡೆದಿದೆ.
ಮಧ್ಯ ರಾತ್ರಿ 12 ಗಂಟೆ ವೇಳೆ ಈ ಅಪಘಾತ ಸಂಭವಿಸಿದೆ. ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಗರ ಕಡಕೋಳ(17), ಶ್ವೇತಾ (13), ಗೋವಿಂದ(13), ಬಸವರಾಜ್ (17) ಮೃತ ದುರ್ದೈವಿಗಳು. ಮೃತರು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದುಬಂದಿದೆ.
ಆಲಗೂರು ಗ್ರಾಮದ ಶ್ರೀ ವರ್ಧಮಾನ ಮಹಾವೀರ ಅಲ್ಪಸಂಖ್ಯಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು. ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆ ಶಾಲಾ ಬಸ್ ನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ