Latest

*ಬಾಲಕನ ಮೇಲೆಯೇ ಹರಿದು ಹೋದ ಸ್ಕೂಲ್ ಬಸ್: 4 ವರ್ಷದ ಬಾಲಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಶಾಲೆಯ ಬಸ್ ಬಾಲಕನ ಮೇಲೆಯೇ ಹರಿದು ಹೋಗಿದ್ದು, ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.

Home add -Advt

ಇಲ್ಲಿನ ಬರಗಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಸಂಗಣ್ಣ ಹೊಸೂರ ಎಂಬುವವರ ಪುತ್ರ 4 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಾಲಕನ ಮೇಲೆ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿದ ಬಾಲಕನ ದೇಹ ನುಜ್ಜುಗುಜ್ಜಾಗಿದ್ದು, ಬಾಲಕ ಸ್ಥಳದಲ್ಲೇ ಉಸಿರು ಚಲ್ಲಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button