Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಶಾಲಾ ಬಸ್ ಪಲ್ಟಿ; ಮಕ್ಕಳು ಸೇರಿ ಮೂವರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶಾಲಾ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಸಾವಗಾಂವ-ಬೆಂಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

ಖಾಸಗಿ ಶಾಲೆಯ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಮಹಿಳೆ ಗಾಯಗೊಂಡಿದ್ದಾರೆ.

ಅಂಗಡಿ ಸಂಸ್ಥೆಯ ಶಾಲ ಬಸ್ ಇದಾಗಿದ್ದು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಟೆಂಪೊ ಓವರ್ ಟೇಕ್ ಮಾಡಲು ಹೊಗಿ ಬಸ್, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಶಾಲಾ ಆಡಳಿತ ಮಂಡಳಿಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳು ಮಕ್ಕಳು ಹಾಗೂ ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button