
ಪ್ರಗತಿವಹಾಹಿನಿ ಸುದ್ದಿ; ಬೆಂಗಳೂರು: ಶಾಲಾ ವಾಹನ ಪಲ್ಟಿಯಾಗಿ ಐವರು ವಿದಾರ್ಥಿಗಳು ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ದಬಳ್ಳಾಪುರ ತಾಲೂಕಿನ ತಿರುಮಗೊಂಡಹಳ್ಳಿಯಲ್ಲಿ ನಡೆದಿದೆ.
ಕೆರೆ ಏರಿ ಮೇಲೆ ಸಾಗುತ್ತಿದ್ದ ಶಾಲಾ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಬಿ.ಹೆಚ್.ಪಬ್ಲಿಕ್ ಶಾಲೆಗೆ ಸೇರಿದ ಬಸ್ ಇದಾಗಿದೆ. ಘಟನೆಯಲ್ಲಿ ಐದು ಮಕ್ಕಳಿಗೆ ಗಾಯಗಳಾಗಿವೆ. ಅದರಲ್ಲಿ ಓರ್ವ ಮಗುವಿಗೆ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬೆನ್ನಲ್ಲೇ ಚಾಲಕ ವಾಹನ ದಿಂದ ಪರಾರಿಯಾಗಿದ್ದು, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ