
ಪ್ರಗತಿವಾಹಿನಿ ಸುದ್ದಿ: ಮಗನನ್ನು ಶಾಲೆಗೆ ಬಿಡಲು ಕರೆದೊಯ್ಯುತ್ತಿದ್ದಾಗ ಬಸ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಇಬ್ಬರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಸಂಗೀತಾ(37) ಹಾಗೂ ಮಗ ಪಾರ್ಥ (8) ಮೃತ ದುರ್ದೈವಿ. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದರು.
ಇಂದು ಬೆಳಿಗ್ಗೆ ಮಗನೊಂದಿಗೆ ಶಾಲೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಕಾಅಲೇಜಿನ ಬಸ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ನೆರೆದಿರುವ ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




