Latest

*ಮತ್ತೊಂದು ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಶಾಲಾ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಮಂಜೇಶ್ವರಂ ಮೀಯಪದವು ಬಳಿ ನಡೆದಿದೆ.

18 ವರ್ಷದ ಅಭಿಷೇಕ್ ಹಾಗೂ ಪ್ರೀತೇಶ್ ಶಟ್ಟಿ ಮೃತರು. ಇನ್ನೋರ್ವ ವಿದ್ಯಾರ್ಥಿ ನಮೀತ್ ಶೆಟ್ಟಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Home add -Advt

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದ ಮೂವರು ವಿದ್ಯಾರ್ಥಿಗಳು ವೇಗವಾಗಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಶಾಲಾ ಬಸ್ ಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಅಪಘಾತದಲ್ಲಿ ಶಾಲಾ ವಾಹನದಲ್ಲಿದ್ದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

*BREAKING: ಮನೆಯೊಂದರಲ್ಲಿ ಬಾಂಬ್ ಸ್ಫೋಟ: ಇಬ್ಬರಿಗೆ ಗಂಭಿರ ಗಾಯ*

https://pragati.taskdun.com/keralatalasyeribomb-blasttwo-injuerd/

Related Articles

Back to top button