Kannada NewsKarnataka NewsLatest

*ಭೀಕರ ಅಪಘಾತ: ಮಹಿಳೆ ಮೇಲೆಯೇ ಹರಿದ ಶಾಲಾ ಬಸ್: ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಮಗಳನ್ನು ಕಾಲೇಜಿಗೆ ಬಿಡಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಶಾಲಾ ವಾಹನ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಈ ದುರಂತ ಸಂಭವಿಸಿದೆ. ಕಾಂತಾ ಮೃತ ಮಹಿಳೆ. ಮಗಳು ನೇಹಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆ ಕಾಂತಾ, ಮಗಳನ್ನು ಕಾಲೇಜಿಗೆ ಬಿಡಲು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಶಾಲಾ ವಾಹನ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ಮಹಿಳೆ ಕಾಂತಾ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಮಹಿಳೆ ಮೇಲೆಯೇ ಶಾಲಾ ಬಸ್ ಹರಿದಿದೆ.

ಬಸ್ ಚಕ್ರದಡಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button