Belagavi NewsBelgaum NewsKannada NewsKarnataka NewsLatest

*ಮುಂಗಾರು ಮಳೆ ಮತ್ತಷ್ಟು ಚುರುಕು: 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ: ಈಗಾಗಲೇ ಚುರುಕು ಪಡೆದಿರುವ ಮುಂಗಾರು ಮಳೆ ಮುಂದಿನ ಮೂರ್ನಾಲ್ಕು ದಿನ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. 

ಇಂದಿನಿಂದ ಆಗಸ್ಟ್ 10 ರವೆರೆಗೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಮೊದಲ ಎರಡು ದಿನ ಯೆಲ್ಲೋ ಅಲರ್ಟ್, ಆಗಸ್ಟ್ 6 ರಿಂದ ಆಗಸ್ಟ್ 8 ರವರೆಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಆ 9 ಮತ್ತು 10 ರಂದು ಸಹ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ.

Home add -Advt

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಹಾಗೆಯೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಭಾನುವಾರ ಹಲವೆಡೆ ಮಳೆಯಾಗಿದೆ. ಸದ್ಯ ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎನ್ನಲಾಗಿತ್ತು. ಆದ್ರೆ ಹವಾಮಾನ ಬದಲಾವಣೆಯಿಂದ ಬೆಂಗಳೂರು ಸೇರಿ ವಿವಿಧೆಡೆ ಉತ್ತಮ ಮಳೆಯಾಗಲಿದೆ. 

Related Articles

Back to top button